ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು, ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
TSK
TSK · ಯೋಹಾನನು 11:25
مراجع Treasury of Scripture Knowledge في ಕನ್ನಡ IRV.
ಮೃತರಾದ ನಿನ್ನ ಜನರು ಬದುಕುವರು, ನಮ್ಮ ಹೆಣಗಳು ಜೀವದಿಂದ ಏಳುವವು, ಧೂಳಿನ ನಿವಾಸಿಗಳೇ, ಎಚ್ಚರಗೊಂಡು ಹರ್ಷಧ್ವನಿಗೈಯಿರಿ! ಯೆಹೋವನೇ, ನೀನು ಸುರಿಸುವ ಇಬ್ಬನಿಯು ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಗೆ ಹಾಕುವುದು.
ಅದಕ್ಕೆ ಯೇಸು, ‹“ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ”› ಎಂದು ಉತ್ತರಕೊಟ್ಟನು.
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
‹ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.›
‹ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ›‹ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.›
ಯೇಸು ಅವನಿಗೆ, ‹“ನಾನೇ ಮಾರ್ಗವೂ, ಸತ್ಯವೂ ಮತ್ತು›‹ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.›
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಆದರೆ ಕ್ರಿಸ್ತನು ನಿಮ್ಮಲ್ಲಿರುವುದಾದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ, ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿರುತ್ತದೆ.
ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆಹೋದವರು ನಾಶವಾದರು ಎಂದರ್ಥ.
¶ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.
ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.
ಸತ್ತವರಲ್ಲಿ ಉಳಿದವರು ಆ ಸಾವಿರ ವರ್ಷಗಳ ಮುಗಿಯುವವರೆಗೂ ಜೀವಿತರಾಗಿ ಏಳಲಿಲ್ಲ. ಇದೇ ಮೊದಲನೇಯ ಪುನರುತ್ಥಾನವು.
ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು.
¶ ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.