TSK

TSK · ಯೋಹಾನನು 12:32

مراجع Treasury of Scripture Knowledge في ಕನ್ನಡ IRV.

العودة إلى المقطع

ಆದಕಾರಣ ಮೋಶೆ ತಾಮ್ರದಿಂದ ಸರ್ಪವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಟ್ಟನು. ಸರ್ಪದಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.

¶ ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.

ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.

ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.

‹ಇದಲ್ಲದೆ›‹ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.›

ಹೀಗಿರಲಾಗಿ ಯೇಸು ಅವರಿಗೆ, ‹“ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.›

¶ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.

ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.

ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.