TSK

TSK · ಯೋಹಾನನು 12:49

مراجع Treasury of Scripture Knowledge في ಕನ್ನಡ IRV.

العودة إلى المقطع

‹ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.›

¶ ‹“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.›

‹ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ”› ಎಂದನು.

‹ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.›

‹ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.›

¶ ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.