TSK

TSK · ಯೋಹಾನನು 13:1

مراجع Treasury of Scripture Knowledge في ಕನ್ನಡ IRV.

العودة إلى المقطع

‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

ತರುವಾಯ ಆತನು ಶಿಷ್ಯರ ಬಳಿಗೆ ಬಂದು ಅವರಿಗೆ, ‹“ನೀವು ಇನ್ನು ನಿದ್ದೆ ಮಾಡಿ ವಿಶ್ರಮಿಸಿಕೊಳ್ಳುತ್ತಿದ್ದೀರೋ; ಇಗೋ, ಅ ಗಳಿಗೆ ಸಮೀಪಿಸಿತು, ಈಗ ಮನುಷ್ಯಕುಮಾರನು ಪಾಪಿಷ್ಠರ ಕೈಗೆ ಒಪ್ಪಿಸಲ್ಪಡುತ್ತಾನೆ.›

¶ ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಆತನು ಅವರಿಗೆ, ‹“ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.›

‹ನಾನು ಪ್ರತಿದಿನ ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ. ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನದ ಕಾಲ”› ಎಂದು ಹೇಳಿದನು.

ಅದಕ್ಕೆ ಯೇಸು ಅವರಿಗೆ, ‹“ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.›

ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

¶ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.

ತಂದೆಯು ತನ್ನ ಕೈಯಲ್ಲಿ ಎಲ್ಲದರ ಮೇಲೆ ಅಧಿಕಾರ ಕೊಟ್ಟಿದ್ದಾನೆಂದೂ, ತಾನು ದೇವರ ಬಳಿಯಿಂದ ಬಂದು, ತಿರುಗಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.

‹ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.›

‹ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.›

‹ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ”› ಎಂದನು.

‹ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು,›‹ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.›

¶ ‹“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ›‹ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.›

‹ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ. ಇನ್ನೂ ತಿಳಿಸುವೆನು. ಏಕೆಂದರೆ,›‹ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ಮತ್ತು ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ”› ಎಂದನು.

ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.

¶ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಮೊದಲಿನಿಂದಲೂ ಇರುವ ನಮ್ಮ ಭರವಸೆಯನ್ನು ಅಂತ್ಯದ ವರೆಗೂ ದೃಢವಾಗಿ ಹಿಡಿದುಕೊಳ್ಳುವುದಾದರೆ ನಾವು ಕ್ರಿಸ್ತನಲ್ಲಿ ಪಾಲುಗಾರರಾಗುತ್ತೇವೆ.

¶ ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,