TSK

TSK · ಯೋಹಾನನು 13:18

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, ‹“ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡಿದುಕೊಡುವವನು.›

ಅದಕ್ಕೆ ಯೇಸು ‹“ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ”› ಎಂದನು.

ಅದಕ್ಕೆ ಯೇಸು, ‹“ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!”› ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.

‹ನೀವು›‹ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.›

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.