TSK

TSK · ಯೋಹಾನನು 15:22

مراجع Treasury of Scripture Knowledge في ಕನ್ನಡ IRV.

العودة إلى المقطع

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.

‹ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.›

‹ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು.›

ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.

¶ ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.

ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು,

ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.