TSK

TSK · ಯೋಹಾನನು 15:6

مراجع Treasury of Scripture Knowledge في ಕನ್ನಡ IRV.

العودة إلى المقطع

ಕತ್ತಲೊಳಗಿಂದ ಅವನು ಪಾರಾಗುವುದಿಲ್ಲ, ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು, ದೇವರ ಶ್ವಾಸದಿಂದ ಒಣಗಿ ಹೋಗುವನು.

ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,

ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?

ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.

‹ಒಳ್ಳೆಯ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ.›

ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

¶ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನನ್ನು ಕುರಿತಾದ ಪರಿಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.

ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.

ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.