ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”
TSK
TSK · ಯೋಹಾನನು 18:11
مراجع Treasury of Scripture Knowledge في ಕನ್ನಡ IRV.
ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, ‹“ನನ್ನ ತಂದೆಯೇ, ಸಾಧ್ಯವಾದರೆ ಈ›‹ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ”› ಎಂದು ದೇವರನ್ನು ಪ್ರಾರ್ಥಿಸಿದನು.
ಆದರೆ ಯೇಸು ಅವರಿಗೆ, ‹“ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.›‹ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?›‹ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?”› ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು.
‹ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.›
ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, ‹“ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.›
‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›
ಯೇಸು, ‹“ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ”› ಎಂದು ಉತ್ತರಕೊಟ್ಟನು.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.