ನಿನ್ನ ನಾಮ ಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
TSK
TSK · ಯೋಹಾನನು 18:20
مراجع Treasury of Scripture Knowledge في ಕನ್ನಡ IRV.
ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ.
¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
¶ ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.
ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, ‹“ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;›
ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
¶ ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ,