TSK

TSK · ಯೋಹಾನನು 18:4

مراجع Treasury of Scripture Knowledge في ಕನ್ನಡ IRV.

العودة إلى المقطع

ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?” ಎಂದು ಉತ್ತರಕೊಟ್ಟನು.

ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

¶ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, ‹“ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.›

‹ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು”› ಎಂದು ಹೇಳಿದನು.

¶ ಆಗ ಯೇಸು, ಅವರಿಗೆ, ‹“ಕುರುಬನನ್ನು ಹೊಡೆಯುವೆನು; ಹಿಂಡಿನ ಕುರಿಗಳು ಚದರಿಹೋಗುವವು ಎಂದು ಬರೆದಿರುವ ಹಾಗೆ ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಹಿಂಜರಿಯುವಿರಿ.”›

¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವುದು.›

¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.

‹ತಂದೆಯು ನನ್ನನ್ನು ಪ್ರೀತಿಸುತ್ತಾನೆ ಏಕೆಂದರೆ, ನಾನು ನನ್ನ ಪ್ರಾಣವನ್ನು ಮರಳಿ ಪಡೆದುಕೊಳ್ಳುವಂತೆ ಅದನ್ನು ಕೊಡುತ್ತಿದ್ದೇನೆ.›

ಯೇಸು ತನ್ನನ್ನು ಹಿಡಿದು ಕೊಡುವವನು ಯಾರೆಂದು ತಿಳಿದಿದ್ದರಿಂದ, ‹“ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ”› ಎಂದು ಹೇಳಿದ್ದನು.

¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.

ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,

¶ ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.