TSK

TSK · ಯೋಹಾನನು 19:18

مراجع Treasury of Scripture Knowledge في ಕನ್ನಡ IRV.

العودة إلى المقطع

ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.

ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.

¶ ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.

¶ ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.