TSK

TSK · ಯೋಹಾನನು 19:34

مراجع Treasury of Scripture Knowledge في ಕನ್ನಡ IRV.

العودة إلى المقطع

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.

ಪೇತ್ರನು ಆತನಿಗೆ, “ನೀನು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು” ಎಂದು ಹೇಳಿದ್ದಕ್ಕೆ, ಯೇಸು, ‹“ನಾನು ನಿನ್ನನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇರುವುದಿಲ್ಲ”› ಎಂದನು.

ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.

ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ.

¶ ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.

ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,