TSK

TSK · ಯೋಹಾನನು 2:10

مراجع Treasury of Scripture Knowledge في ಕನ್ನಡ IRV.

العودة إلى المقطع

ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.

ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.

ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.