ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.
TSK
TSK · ಯೋಹಾನನು 2:4
مراجع Treasury of Scripture Knowledge في ಕನ್ನಡ IRV.
¶ ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
ಆಗ ಯೇಸು ಆಕೆಗೆ, ‹“ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ”› ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
ಅದಕ್ಕೆ ಯೇಸು ಅವರಿಗೆ, ‹“ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.›
ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.
¶ ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.