TSK

TSK · ಯೋಹಾನನು 20:13

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.

ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,

ಯೇಸು, ‹“ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು”› ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.

¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›

ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು

ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.