TSK

TSK · ಯೋಹಾನನು 20:27

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.

ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ”› ಅಂದನು.

ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?”› ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ ‹“ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ”› ಅಂದನು.

ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.