TSK

TSK · ಯೋಹಾನನು 3:10

مراجع Treasury of Scripture Knowledge في ಕನ್ನಡ IRV.

العودة إلى المقطع

ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.

ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.

ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.

ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.

ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ, ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ.

ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

¶ “ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, ‹“ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;›

ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.