TSK

TSK · ಯೋಹಾನನು 3:7

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”›

‹ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?›

ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ ‹“ಈ ಮಾತಿನಿಂದ ನಿಮಗೆ ಬೇಸರವಾಯಿತೋ?›

ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

¶ ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

¶ ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.