TSK

TSK · ಯೋಹಾನನು 3:8

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು.

ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.

ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.

¶ ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; ‹“ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ›

ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.

ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.

ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.

ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.