TSK

TSK · ಯೋಹಾನನು 4:14

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.

ಯೇಸು ಅವರಿಗೆ ‹“ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ›‹ಬಾಯಾರಿಕೆಯಾಗುವುದಿಲ್ಲ.›

‹ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು”› ಎಂದು ಕೂಗಿ ಹೇಳಿದನು.

‹ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?”› ಎಂದು ಕೇಳಿದಕ್ಕೆ,

‹ನೀನು ಯಾರಾರನ್ನು ಕೊಟ್ಟಿದ್ದೀಯೋ›‹ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ.›

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಆತನು ನಮ್ಮ ಮೇಲೆ ತನ್ನ ಮುದ್ರೆಯನ್ನೊತ್ತಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಖಾತರಿಯಾಗಿ ಅನುಗ್ರಹಿಸಿದ್ದಾನೆ.

ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.