TSK

TSK · ಯೋಹಾನನು 5:14

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

¶ “ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,

ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.

ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.

ಹೀಗಿರುವುದರಿಂದ ನನ್ನ ಸುತ್ತಲಿರುವ ವೈರಿಗಳ ಮೇಲೆ, ನನ್ನ ತಲೆ ಎತ್ತಲ್ಪಟ್ಟಿರುವುದು; ನಾನು ಯೆಹೋವನ ಗುಡಾರದಲ್ಲಿ, ಉತ್ಸಾಹಧ್ವನಿಯೊಡನೆ ಯಜ್ಞಗಳನ್ನು ಸಮರ್ಪಿಸುವೆನು. ಆತನನ್ನು ಹಾಡುತ್ತಾ ವಾದ್ಯಬಾರಿಸುವೆನು.

ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.

ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.

ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.

ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, ‹“ಮಗನೇ, ನಿನ್ನ›‹ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.

ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ ‹“ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ”› ಎಂದು ಹೇಳಿದನು.

‹ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,›‹ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.›