TSK

TSK · ಯೋಹಾನನು 5:36

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›

‹ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.›

ಅದಕ್ಕೆ ಯೇಸು, ‹“ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.›

ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.

‹ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ›

¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ.