TSK

TSK · ಯೋಹಾನನು 5:43

مراجع Treasury of Scripture Knowledge في ಕನ್ನಡ IRV.

العودة إلى المقطع

‹ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.›

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

ಹೀಗಿರಲಾಗಿ ಯೇಸು ಅವರಿಗೆ, ‹“ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.›

‹ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ”› ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.

ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.

ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.