ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
TSK
TSK · ಯೋಹಾನನು 6:26
مراجع Treasury of Scripture Knowledge في ಕನ್ನಡ IRV.
ಯೇಸು ಅವನಿಗೆ, ‹“ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು›‹ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,”› ಎಂದು ಉತ್ತರ ಕೊಟ್ಟನು.
ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
‹ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆಂದು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›
‹ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ”› ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ.