ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
TSK
TSK · ಯೋಹಾನನು 6:27
مراجع Treasury of Scripture Knowledge في ಕನ್ನಡ IRV.
ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು, ಈ ರೀತಿಯಾಗಿ ಜನರು ಪಟ್ಟ ಪರಿಶ್ರಮವು ವ್ಯರ್ಥವಾಗುವುದು ಎಂದು ಯೆಹೋವನು ನುಡಿದ್ದರಿಂದಲೇ ಅಲ್ಲವೇ; ಇದೆಲ್ಲ ಸೇನಾಧೀಶ್ವರನ ಚಿತ್ತವಷ್ಟೇ.
¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›
ಯೇಸು ಅವನಿಗೆ, ‹“ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ”› ಎಂದು ಹೇಳಿದನು.
ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.
ಆಗ ಆ ಮೋಡದೊಳಗಿಂದ, “ಈತನು ನನ್ನ ಮಗನು. ನಾನು ಆರಿಸಿಕೊಂಡವನು, ಈತನ ಮಾತನ್ನು ಕೇಳಿರಿ” ಎಂಬ ವಾಣಿ ಆಯಿತು.
ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.
ಯೇಸು ಆಕೆಗೆ, ‹“ಈ ನೀರನ್ನು ಕುಡಿಯುವವರೆಲ್ಲರಿಗೆ ಪುನಃ ನೀರಡಿಕೆಯಾಗುವುದು,›
¶ ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.
‹ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು”› ಎಂದು ಹೇಳಿದನು.
‹ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾನೆ”› ಎಂದನು.
‹ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ›
‹ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ”› ಎಂದು ಹೇಳಿದನು.
‹ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ›
¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
ಅನಂತರ ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
“ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. ಕರ್ತನಿಗೋಸ್ಕರ ಇರುವುದಾಗಿದೆ. ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗಾದರೋ ಅಪೊಸ್ತಲನಾಗಿದ್ದೇನೆ. ನಾನು ಕರ್ತನ ಅಪೊಸ್ತಲನಾಗಿದ್ದೇನೆಂಬುದಕ್ಕೆ ನೀವೇ ನನ್ನ ಮುದ್ರೆಯಾಗಿದ್ದಿರಿ.
ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.
ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.