TSK

TSK · ಯೋಹಾನನು 6:44

مراجع Treasury of Scripture Knowledge في ಕನ್ನಡ IRV.

العودة إلى المقطع

ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.

‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›

ಅದಕ್ಕೆ ಯೇಸು, ‹“ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.›

‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›

‹‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.›

‹ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.›

¶ ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.