ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
TSK
TSK · ಯೋಹಾನನು 6:64
مراجع Treasury of Scripture Knowledge في ಕನ್ನಡ IRV.
‹ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.›
ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ ‹“ಈ ಮಾತಿನಿಂದ ನಿಮಗೆ ಬೇಸರವಾಯಿತೋ?›
ಅದಕ್ಕೆ ಯೇಸು ‹“ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ”› ಎಂದನು.
‹ನಾನು›‹ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ”› ಎಂದನು.
‹ಆದರೂ, ನೀವು ನಂಬದೆ ಇದ್ದೀರಿ, ಏಕೆಂದರೆ ನೀವು ನನ್ನ ಕುರಿಗಳಲ್ಲ.›
‹ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ›‹ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.›
ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.