TSK

TSK · ಯೋಹಾನನು 7:31

مراجع Treasury of Scripture Knowledge في ಕನ್ನಡ IRV.

العودة إلى المقطع

“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.

‹ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.›

¶ ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.

“ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.

ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.

¶ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.

ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ.

ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.