TSK

TSK · ಯೋಹಾನನು 8:29

مراجع Treasury of Scripture Knowledge في ಕನ್ನಡ IRV.

العودة إلى المقطع

“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.

ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ಉಪಯೋಗಮಾಡಿದ್ದು ಹಾಳೇ, ಬರಿ ಗಾಳಿಯೇ. ಆದರೂ ನನ್ನ ನ್ಯಾಯವು ಯೆಹೋವನಲ್ಲಿದೆ. ನನಗೆ ಲಾಭವು ನನ್ನ ದೇವರಿಂದಲೇ ಆಗುವುದು” ಎಂದು ಅಂದುಕೊಂಡೆನು.

ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›

‹ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.›

‹ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.›

‹ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.›

‹ನೀನು ನನಗೆ ಕೊಟ್ಟ ಕೆಲಸವನ್ನು ನಾನು›‹ನೆರವೇರಿಸಿ›‹ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.›

¶ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.

ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ,