ಆಗ ನೀನು ಫರೋಹನಿಗೆ, ‘ಇಸ್ರಾಯೇಲನು ನನ್ನ ಮಗನು, ನನಗೆ ಚೊಚ್ಚಲಮಗನು.
TSK
TSK · ಯೋಹಾನನು 8:41
مراجع Treasury of Scripture Knowledge في ಕನ್ನಡ IRV.
ದುರಾಚಾರಿಗಳಿರಾ, ಅವಿವೇಕಿಗಳಿರಾ, ಯೆಹೋವನ ವಿಷಯದಲ್ಲಿ ಈ ರೀತಿಯಾಗಿ ವರ್ತಿಸಬಹುದೇ? ಆತನು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೇ; ನಿಮ್ಮನ್ನು ಜನಾಂಗವನ್ನಾಗಿ ಮಾಡಿ ಸ್ಥಾಪಿಸಿದನಲ್ಲವೇ.
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
¶ “ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.
¶ “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
‹ನಾನು›‹ತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ”› ಎಂದನು.