TSK

TSK · ಯೋಹಾನನು 8:48

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.

‹ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ›‹ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?›

‹ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.›

ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ.

¶ ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?

‹ನೀವು ನನ್ನನ್ನು ಗುರುವೆಂದೂ ಮತ್ತು ಕರ್ತನೆಂದೂ ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.›

ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.