TSK

TSK · ಯೋಹಾನನು 8:59

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.

ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.

ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.

‹ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ”› ಎಂದನು.

ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.

‹ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ”› ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.

¶ ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,