ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
TSK
TSK · ಯೋಹಾನನು 9:7
مراجع Treasury of Scripture Knowledge في ಕನ್ನಡ IRV.
¶ ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.
“ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ,
ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು.
ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.
ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.
‹ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?›
¶ ಆಗ ಯೇಸುವು, ‹“ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು”› ಎಂದನು.
ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.