¶ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
TSK
TSK · ಯೋನ 1:7
مراجع Treasury of Scripture Knowledge في ಕನ್ನಡ IRV.
ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.
ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು
ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
ಅನಂತರ ಸೌಲನು, “ಇಸ್ರಾಯೇಲ್ಯರ ದೇವರೇ, ಸತ್ಯವನ್ನು ತಿಳಿಸು” ಎಂದು ಯೆಹೋವನನ್ನು ಪ್ರಾರ್ಥಿಸಿ ಚೀಟು ಹಾಕಿದಾಗ ಅದು ಅವನಿಗೂ ಯೋನಾತಾನನಿಗೂ ಬಂದಿತು, ಜನರು ಪಾರಾದರು.
ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.
ಮಡಲಿನಲ್ಲಿ ಚೀಟು ಹಾಕಬಹುದು, ಅದರ ತೀರ್ಪು ಯೆಹೋವನದೇ.
ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.