ನೀನು ಹೀಗೆ ಮಾಡುವುದಕ್ಕಿಂತ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರವಾಗುತ್ತದೆ; ನನಗಾಗುತ್ತಿರುವ ದುರಾವಸ್ಥೆಯನ್ನು ನಾನು ಸಹಿಸಲಾರೆ” ಎಂದನು.
TSK
TSK · ಯೋನ 4:3
مراجع Treasury of Scripture Knowledge في ಕನ್ನಡ IRV.
ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
ಅಯ್ಯೋ, ನನ್ನ ವಿಜ್ಞಾಪನೆಯು ನೆರವೇರುವುದಿಲ್ಲವೇ, ನಾನು ಬಯಸುವುದನ್ನು ದೇವರು ಕೊಡುವುದಿಲ್ಲವೇ?
ನಾನು ಬೇಸರಗೊಂಡಿದ್ದೇನೆ, ಹೀಗೆ ನಿರಂತರ ಬದುಕುವುದಕ್ಕೆ ಇಷ್ಟವಿಲ್ಲ. ನನ್ನನ್ನು ಬಿಟ್ಟುಬಿಡು; ನನ್ನ ದಿನಗಳು ಉಸಿರಿನಂತಿವೆ.
ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.
ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.