ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು.
TSK
TSK · ಯೆಹೋಶುವ 11:21
مراجع Treasury of Scripture Knowledge في ಕನ್ನಡ IRV.
ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ, ‘ಆ ದೇಶದ ಜನರು ನಮಗಿಂತ ಬಲಿಷ್ಠರಾಗಿಯೂ ಮತ್ತು ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡದಾಗಿಯೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳಿಂದ ಇವೆ. ಅಲ್ಲಿ ನಾವು ಎತ್ತರವಾದ ಪುರುಷರನ್ನು ಅಂದರೆ ಅನಾಕೀಮ್ ವಂಶಸ್ಥರ ಮಕ್ಕಳನ್ನು ನೋಡಿದ್ದೇವೆ’ ಎಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ” ಅಂದುಕೊಳ್ಳುತ್ತಿದ್ದಿರಿ.
ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು.
¶ ಅವರು ಮೊದಲು ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು, ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬುವರನ್ನು ಸೋಲಿಸಿದರು.
ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.
ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.
¶ ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.