TSK

TSK · ಯೆಹೋಶುವ 13:16

مراجع Treasury of Scripture Knowledge في ಕನ್ನಡ IRV.

العودة إلى المقطع

ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಪೂರ್ವದ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ನದಿಯ ವರೆಗೂ ಅವನ ದೇಶವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದನು.

¶ ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.

ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾಗಿದ್ದವನು ಸೀಹೋನ್. ಇವನು ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ಕಣಿವೆಯಲ್ಲಿಯೇ ಇದ್ದ ಪಟ್ಟಣಗಳು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧಪ್ರಾಂತ್ಯವು

ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

ಇಸ್ರಾಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ, ಅವುಗಳ ಗ್ರಾಮಗಳಲ್ಲಿಯೂ, ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ. ಇಷ್ಟು ದಿನಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?

ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಇವುಗಳ ರೋದನವು ಯಹಜಿನ ಪಟ್ಟಣದವರೆಗೂ ಕೇಳಿಸುತ್ತದೆ. ಇದರಿಂದ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುತ್ತಾರೆ; ಅವರ ಹೃದಯಗಳು ಭಯದಿಂದ ತತ್ತರಿಸುತ್ತದೆ.

ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,