TSK

TSK · ಯೆಹೋಶುವ 21:11

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿರುವುದು. ಅದು ಅಬ್ರಹಾಮ ಇಸಾಕರು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.

¶ ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.

ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.

¶ ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.

ನಾಲ್ಕು ವರ್ಷಗಳಾದ ನಂತರ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ.

¶ ಇದಾದ ನಂತರ ಮರಿಯಳು ಎದ್ದು ತ್ವರೆಯಾಗಿ ಯೆಹೂದದ ಮಲೆನಾಡಿನಲ್ಲಿರುವ ಒಂದು ಊರಿಗೆ ಹೋದಳು.