TSK

TSK · ಯೆಹೋಶುವ 21:43

مراجع Treasury of Scripture Knowledge في ಕನ್ನಡ IRV.

العودة إلى المقطع

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.

ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.

ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.

ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

¶ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ

“ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.

ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.

ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.

ಅವರು ಆ ದೇಶದಲ್ಲಿ ಹೋಗಿ ಸೇರಿಕೊಂಡು ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದೆ.

ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಶತ್ರುಗಳು ಅವರನ್ನು ಕುಗ್ಗಿಸಿದರು; ಅವರ ಕೈಕೆಳಗೆ ತಗ್ಗಿಹೋದರು.