ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
TSK
TSK · ಯೆಹೋಶುವ 8:2
مراجع Treasury of Scripture Knowledge في ಕನ್ನಡ IRV.
ಪಟ್ಟಣದಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ, ಹುಡುಗರನ್ನೂ, ಮುದುಕರನ್ನೂ, ದನ, ಕುರಿ ಕತ್ತೆಗಳನ್ನೂ ಸಂಪೂರ್ಣವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.
ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.
ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.
ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
¶ ಯೆರಿಕೋವಿನವರನ್ನೂ ಮತ್ತು ಆಯಿ ಎಂಬ ಊರಿನವರನ್ನೂ ಯೆಹೋಶುವನು ಸಂಹರಿಸಿದ ಸುದ್ದಿಯು ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು
¶ ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.
¶ ಆಗ ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚು ಹಾಕುವುದಕ್ಕೆ ಇರಿಸಿ,
ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.
ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು, ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದೆ ಇರನು.
ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.