TSK

TSK · ನ್ಯಾಯಸ್ಥಾಪಕರು 13:20

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,

ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.

ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು.

ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು ಕಣವನ್ನು ಬಿಟ್ಟು ಹೋಗಿ ಅವನಿಗೆ ಅಡ್ಡ ಬಿದ್ದನು.

ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

¶ ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.

ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.