ನಾನು ಆಕೆಯನ್ನು ಆಶೀರ್ವದಿಸಿ, ಆಕೆಯಿಂದ ನಿನಗೆ ಒಬ್ಬ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು” ಎಂದು ಹೇಳಿದನು.
TSK
TSK · ನ್ಯಾಯಸ್ಥಾಪಕರು 13:3
مراجع Treasury of Scripture Knowledge في ಕನ್ನಡ IRV.
ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.
¶ ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
ಆದ್ದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರುಗಿ ಬಂದಿದ್ದಾನೆ” ಎಂದು ತಿಳಿಸಲು
ಎಲೀಷನು ಆಕೆಗೆ, “ನೀನು ಬರುವ ವರ್ಷ, ಇದೇ ಕಾಲದಲ್ಲಿ, ಒಬ್ಬ ಮಗನನ್ನು ನಿನ್ನ ಮಡಿಲಲ್ಲಿ ಹೊಂದಿರುವಿ” ಎಂದು ಹೇಳಿದನು. ಅದಕ್ಕೆ ಆಕೆಯು, “ದೇವರ ಮನುಷ್ಯನೇ, ಒಡೆಯನೇ, ಹೀಗೆ ನಿನ್ನ ದಾಸಿಗೆ ಸುಳ್ಳನ್ನು ಹೇಳಬೇಡ” ಎಂದು ನುಡಿದಳು.
ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.