TSK

TSK · ನ್ಯಾಯಸ್ಥಾಪಕರು 19:21

مراجع Treasury of Scripture Knowledge في ಕನ್ನಡ IRV.

العودة إلى المقطع

ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.

¶ ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.

ಅವನಿಗೆ, “ಮನೆಗೆ ಹೋಗಿ ಕೈಕಾಲು ತೊಳೆದುಕೋ” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೆ ಅರಸನ ಭೋಜನ ಪದಾರ್ಥಗಳು ಹೋದವು.

ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.

ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.