¶ ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
TSK
TSK · ನ್ಯಾಯಸ್ಥಾಪಕರು 2:20
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.
ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
¶ ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.
ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.