TSK

TSK · ನ್ಯಾಯಸ್ಥಾಪಕರು 21:4

مراجع Treasury of Scripture Knowledge في ಕನ್ನಡ IRV.

العودة إلى المقطع

ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.

ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.

¶ ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.

ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.