TSK

TSK · ನ್ಯಾಯಸ್ಥಾಪಕರು 3:8

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಕೋಪಗೊಂಡು ನಿಮ್ಮ ಶತ್ರುಗಳನ್ನು ಕತ್ತಿಯಿಂದ ಸಂಹಾರಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.

ಯೆಹೋವನು ಅಂಥವನನ್ನು ಎಂದಿಗೂ ಕ್ಷಮಿಸದೆ ಬಹಳ ಮಹಾಕೋಪದಿಂದ, ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವನು.

ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.

ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.

ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡೆಸಿದರು;

ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.