TSK

TSK · ಪ್ರಲಾಪಗಳು 1:2

مراجع Treasury of Scripture Knowledge في ಕನ್ನಡ IRV.

العودة إلى المقطع

ನನ್ನ ಸಹೋದರರಾದರೋ ತೊರೆಯ ಹಾಗೂ, ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.

ನನ್ನ ಸಹೋದರರನ್ನು ನನ್ನಿಂದ ಅಗಲಿಸಿದ್ದಾನೆ, ನನ್ನ ಪರಿಚಿತರು ನನ್ನನ್ನು ಸಂಪೂರ್ಣವಾಗಿ ತೊರೆದಿದ್ದಾರೆ.

ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.

ಅವಳು ಹೆತ್ತ ಮಕ್ಕಳಲ್ಲಿ ಅವಳನ್ನು ನಡೆಸಿಕೊಂಡು ಹೋಗುವವನು ಯಾರೂ ಇಲ್ಲ. ಸಾಕಿದ ಆ ಸಕಲ ಕುಮಾರರಲ್ಲಿ ಅವಳ ಕೈ ಹಿಡಿಯುವವನು ಒಬ್ಬನೂ ಇಲ್ಲ.

ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.

ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.

ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ನಾನು ಕೂಗಿಕೊಂಡರೂ ನನ್ನ ನಲ್ಲರಿಂದ ನನಗೆ ಮೋಸವಾಯಿತು, ನನ್ನ ಯಾಜಕರೂ ಮತ್ತು ಹಿರಿಯರೂ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದು ಆಹಾರವನ್ನು ಹುಡುಕುವುದರಲ್ಲಿಯೇ ಪಟ್ಟಣದೊಳಗೆ ಪ್ರಾಣಬಿಟ್ಟರು.

ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.

ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.

ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.

ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.