TSK

TSK · ಪ್ರಲಾಪಗಳು 1:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.

ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.

ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.

ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.

ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.

ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.

ಅವರನ್ನು ನೋಡುವವರು, “ತೊಲಗಿರಿ, ಅಶುದ್ಧರು ನೀವು, ತೊಲಗಿರಿ, ತೊಲಗಿರಿ, ಮುಟ್ಟಬೇಡಿರಿ” ಎಂದು ಕೂಗುತ್ತಾರೆ. ಅವರು ಓಡಿಹೋಗಿ ಅನ್ಯದೇಶಗಳಲ್ಲಿ ಅಲೆಯುತ್ತಿರಲು, “ಇವರು ಇನ್ನು ಇಲ್ಲಿ ವಾಸಿಸಬಾರದು” ಎಂದು ಆಯಾ ದೇಶಗಳವರು ಅಂದುಕೊಳ್ಳುತ್ತಾರೆ.

ನಮ್ಮನ್ನು ಹಿಂದಟ್ಟುವವರು ನಮ್ಮ ಕುತ್ತಿಗೆಯನ್ನು ಹಿಡಿದಿದ್ದಾರೆ, ಬಳಲಿಹೋಗಿದ್ದೇವೆ, ಯಾವ ವಿಶ್ರಾಂತಿಯೂ ಇಲ್ಲ.

¶ ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಆತನು ಹೀಗೆ ಅಪ್ಪಣೆ ಕೊಟ್ಟನು, “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ. ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳುವ ಹಾಗೆ ಮಾಡಿ, ಉಳಿದವರನ್ನು ಖಡ್ಗದಿಂದ ಸಂಹರಿಸುವೆನು. ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.