TSK

TSK · ಪ್ರಲಾಪಗಳು 2:1

مراجع Treasury of Scripture Knowledge في ಕನ್ನಡ IRV.

العودة إلى المقطع

“ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.

ಅವರು ಸೇರಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನೆಂದರೆ, “ನನ್ನ ಸಹೋದರರೇ, ನನ್ನ ಪ್ರಜೆಗಳೇ, ನನ್ನ ಮಾತನ್ನು ಕೇಳಿರಿ, ಯೆಹೋವನ ಒಡಂಬಡಿಕೆಯ ಮಂಜೂಷಕ್ಕೋಸ್ಕರ ನಮ್ಮ ದೇವರ ಪಾದಪೀಠಕ್ಕೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.

ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು. ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು.

ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.

ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.

¶ ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;

¶ “‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.

ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.

‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›

ಯೇಸು ಅವರಿಗೆ, ‹“ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.›