ಯೆಹೋವನೇ, ಸಂಪೂರ್ಣಮನಸ್ಸಿನಿಂದ ಮೊರೆಯಿಟ್ಟಿದ್ದೇನೆ, ಸದುತ್ತರವನ್ನು ದಯಪಾಲಿಸು, ನಿನ್ನ ನಿಬಂಧನೆಗಳನ್ನು ಅನುಸರಿಸುವೆನು.
TSK
TSK · ಪ್ರಲಾಪಗಳು 2:18
مراجع Treasury of Scripture Knowledge في ಕನ್ನಡ IRV.
ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.
ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.
ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.
ಗೋಡೆಯೊಳಗಿಂದ ಕಲ್ಲುಗಳು ನಿನ್ನ ಮೇಲೆ ತಪ್ಪುಹೊರಿಸಿ ಕೂಗುವವು; ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೊಡುತ್ತವೆ.’